ಪುತ್ತೂರು: ಸ.ಉ.ಹಿ.ಪ್ರಾ.ಶಾಲೆ ಮುಂಡೂರು, ಶಾಲಾಭಿವೃದ್ಧಿ ಸಮಿತಿ ಮುಂಡೂರು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮುಂಡೂರು ಇದರ ಸಂಯುಕ್ತ ಆಶ್ರಯದಲ್ಲಿ ಎ 13 ರಿಂದ ಉಚಿತ ಬೇಸಿಗೆ ಶಿಬಿರ ಮುಂಡೂರು 2025 ಆರಂಭಗೊಂಡು ಇದು ಎ.23ರವರೆಗೆ ನಡೆಯಿತು.
ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿ ಸ .ಉ .ಹಿ ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ವಿಜಯ ಪಿ ಮಾತನಾಡಿ, ಹಿರಿಯ ವಿದ್ಯಾರ್ಥಿ ಸಂಘದಿಂದ ಇಂತಹ ಉತ್ತಮ ಕಾರ್ಯಗಳು ನಡೆಯುತ್ತಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ ಇದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ಮುಖ್ಯ ಅತಿಥಿ ನಿವೃತ್ತ ಮುಖ್ಯ ಗುರು ಹುಕ್ರ ಯೋಗದ ಮಹತ್ವದ ಬಗ್ಗೆ ತಿಳಿಸಿದರು .ಇನ್ನೋರ್ವ ಮುಖ್ಯ ಅತಿಥಿ ಹಿರಿಯ ವಿದ್ಯಾರ್ಥಿ ಹಾಗೂ ಅಧ್ಯಕ್ಷ ಬಾಲಕೃಷ್ಣ ಕಣ್ಣರಾಯ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು. ಶಿಬಿರಾರ್ಥಿಗಳು ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಎಸ್. ಡಿ.ಎಂ. ಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಮಾತನಾಡಿ ಇದು ಮಕ್ಕಳಲ್ಲಿ ಸ್ವಯಂ ಶಿಸ್ತಿನ ಬೆಳವಣಿಗೆಗೆ ಅನುಕೂಲವಾಗಿದೆ. ಮಕ್ಕಳಲ್ಲಿ ಏಕಾಗ್ರತೆ ಪ್ರಾಮಾಣಿಕತೆ ಬೆಳೆಯಲು ಇಂತಹ ಕಾರ್ಯಕ್ರಮಗಳು ಬಹಳ ಉಪಯೋಗವಾಗುತ್ತದೆ ಎಂದರು.
ಯೋಗ ಶಿಕ್ಷಕ ಅಶೋಕ್ ಅಂಬಟ ಹಾಗೂ ಕಾರ್ಯಕ್ರಮದ ನಿರ್ವಾಹಕ ಪ್ರಕಾಶ್ ಡಿಸೋಜರನ್ನು ಸನ್ಮಾನಿಸಲಾಯಿತು. ಶಿಬಿರಾರ್ಥಿಗಳಿಗೆ ,ಸಂಪನ್ಮೂಲ ವ್ಯಕ್ತಿಗಳಿಗೆ,ದಾನಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಧನ್ವಿತಾ, ಅನ್ವಿತಾ, ವೇದಿತಾ, ತ್ರಿಷಾ ಪ್ರಾರ್ಥಿಸಿದರು.ಸೊನಾಲಿ ರೈ ಪಿ ಸ್ವಾಗತಿಸಿ, ಸಮರ್ಥ್ ಡಿ ಕುಲಾಲ್ ವಂದಿಸಿದರು.ಅಭಿನವ್ ಪಿ.ಎ ನ್ ಕಾರ್ಯಕ್ರಮ ನಿರ್ವಹಿಸಿದರು.