ಪುತ್ತೂರು: ಪುತ್ತೂರು ಸಂತ ಫಿಲೋಮಿನ ಕಾಲೇಜಿನ 2005 ನೇ ಸಾಲಿನ ಬಿ.ಎ ವಿದ್ಯಾರ್ಥಿ ಮಿತ್ರರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಎ.27 ರಂದು ದರ್ಬೆ ಶ್ರೀ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆಯಿತು.
ಸುಮಾರು 30 ಸದಸ್ಯರ 60 ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಮುಖ್ಯ ಭಾಷಣಕಾರರಾಗಿ ಹಿರಿಯ ವಿದ್ಯಾರ್ಥಿ ಮತ್ತು ಪ್ರಸ್ತುತ ರಾಜಕೀಯ ಶಾಸ್ತ್ರ ಉಪನ್ಯಾಸಕ ಭರತ್ ಅವರು ಪ್ರಸ್ತುತ ವಿದ್ಯಾಭ್ಯಾಸದ ಬಗ್ಗೆ ಮತ್ತು ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು ಮತ್ತು ಹಳೆ ವಿದ್ಯಾರ್ಥಿ ಸಂಘದ ಮಹತ್ವದ ಬಗ್ಗೆ ವಿವರಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಗಂತ್ ಧಂಬೆಕೊಡಿ ಸ್ವಾಗತಿಸಿದರು. ಹರ್ಷ ರೈ ವಂದಿಸಿದರು.