ಆಲಂಕಾರು: ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ಪ್ರಭು ರವರನ್ನು ಆಯ್ಕೆ ಮಾಡಲಾಗಿದೆ.
ಎ.26 ರಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.ಲಕ್ಷ್ಮೀ ನಾರಾಯಣ ಪ್ರಭುರವರು ಆಲಂಕಾರು ಉದ್ಯಮಿಯಾಗಿದ್ದು, ಆಲಂಕಾರು ಯುವಕ ಮಂಡಲದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದು,ಪ್ರಸಕ್ತ ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ, ಆಲಂಕಾರು ವರ್ತಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ಸೀಮಾ ದೇವಸ್ಥಾನ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.