ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟವರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು (ಕೆಎ 53, ಎಂಎಚ್ 2048)ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ(ಕೆಎ 41, 4310) ನಡುವೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಅಬ್ದುಲ್ ಶಕ್ರು ಚೌಧರಿ ಎಂಬವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಮೃತರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು, ಮೊಮ್ಮಗ ಅನ್ಸು ಎಂಬವರಿದ್ದು ಗಾಯಗೊಂಡಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.