ಪುತ್ತೂರು: ವಾಟ್ಸಪ್‌ನಲ್ಲಿ ಕೋಮು ದ್ವೇಷ ಸೃಷ್ಟಿಯ ಸಂದೇಶ-ಪ್ರಕರಣ ದಾಖಲು

0

ಪುತ್ತೂರು: ವಾಟ್ಸಪ್ ಗ್ರೂಪ್‌ಗಳಲ್ಲಿ ಕೋಮು ದ್ವೇಷ ಸೃಷ್ಟಿಸುವ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಏ.27ರಂದು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೆಲವು ಕಡೆ ಗುಂಪು ಗುಂಪಾಗಿ ಸಾರ್ವಜನಿಕರು ವಾಟ್ಸಪ್ ಸಂದೇಶ ನೋಡುತ್ತಿದ್ದು ವಿಚಾರಿಸಿದಾಗ ಅನು ಪುತ್ತೂರು ಎಂಬವರು ಮೊಬೈಲ್‌ನಿಂದ ಕೋಮು ದ್ವೇಷ ಭಾವನೆ ಸೃಷ್ಟಿಸುವ ಸಂದೇಶ ರವಾನಿಸಿರುವುದು ಬೆಳಕಿಗೆ ಬಂದಿತ್ತು. ಸರಕಾರಿ ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಯವರ ಮೇಲೆ ಹಲ್ಲೆಗೆ ಯತ್ನಿಸಿ ಅನುಚಿತ ವರ್ತನೆ ಮಾಡಿದ ಆರೋಪಿಗಳನ್ನು ಬಂಧಿಸುವ ವಿಚಾರವನ್ನು ಮುಂದಿಟ್ಟುಕೊಂಡು ಒಂದು ಧರ್ಮದ ವಿರುದ್ಧವಾಗಿ ದ್ವೇಷ ಬಿತ್ತುವ ಬರಹಗಳನ್ನು ಬೇರೆ ಬೇರೆ ವಾಟ್ಸ್ ಆಪ್ ಗ್ರೂಪ್‌ಗಳಿಗೆ ಕಳುಹಿಸುತ್ತಿರುವುದು ಕಂಡು ಬಂದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ವೈಮನಸ್ಸು, ವೈರತ್ವ, ದ್ವೇಷ ಹಾಗೂ ಕೋಮು ಭಾವನೆ ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಸಾಧ್ಯತೆಗಳು ಇರುವುದರಿಂದ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಂಭವ ಇರುವುದರಿಂದ ಆರೋಪಿಯ ವಿರುದ್ಧ ಪೊಲೀಸರು ಕಲಂ:353(2),196(1)(a) BNS 2023 ರಂತೆ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here