*ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ
*ಸರಸ್ವತಿ ಪೂಜೆ, ಭಗವದ್ಗೀತೆ ಪುಸ್ತಕ ನೀಡಿ ಸ್ವಾಗತ
*ಹಿರಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ಪುತ್ತೂರು: ವಿವೇಕಾನಂದ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಏ.3ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ. ಮನಮೋಹನ ಯಂ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಟಿಎಫ್‌ಇಯ ಆಡಳಿತ ವಿಭಾಗದ ಮ್ಯಾನೇಜರ್ ಹಾಗು ಕಾಲೇಜಿನ ಹಿರಿಯ ವಿದ್ಯಾರ್ಥಿ ಸದಾಶಿವ ಎನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಹಿರಿಯ ವಿದ್ಯಾರ್ಥಿ ಪ್ರಕಾಶ್ ಮೂಡಿತ್ತಾಯ ಅವರು ಬೀಳ್ಕೊಡುಗೆಯ ಮಾತುಗಳನ್ನಾಡಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಉಪಸ್ಥಿತಿಯಲ್ಲಿರುತ್ತಾರೆ. ಪೂರ್ವಾಹ್ನ ಸರಸ್ವತಿ ಪೂಜೆ ನೆರವೇರಲಿದ್ದು, ಬಳಿಕ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದಿಂದ ಭಗವದ್ಗೀತೆ ಪುಸ್ತಕ ನೀಡಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದವರು ಹೇಳಿದರು.
ಗೌರವಾರ್ಪಣೆ:
ಕಾಲೇಜಿನ ಆರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಮುಖ್ಯಸ್ಥ ಡಾ. ಪಿ.ಕೆ. ಬಾಲಕೃಷ್ಣ, ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಹಿರಿಯ ಪತ್ರಕರ್ತ,ಸಾಹಿತಿಯಾಗಿರುವ ಗೋಪಾಲಕೃಷ್ಣ ಕುಂಟಿನಿ, ವಿಶ್ರಾಂತ ಅಧೀಕ್ಷಕಿ ಸಾವಿತ್ರಿ ಎನ್ ಹೆಚ್, ವಿಶ್ರಾಂತ ಪ್ರಥಮ ದರ್ಜೆ ಸಹಾಯಕ ಅನಂತ ಪದ್ಮನಾಭ ಪ್ರಭು ಅವರಿಗೆ ಗೌರವಾರ್ಪಣೆ ನಡೆಯಲಿದೆ. ಜೊತೆಗೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ರ‍್ಯಾಂಕ್, ಚಿನ್ನದ ಪದಕ ಹಾಗು ನಗದು ಪುರಸ್ಕಾರಕ್ಕೆ ಭಾಜನರಾದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಡಾ. ಮನಮೋಹನ ಅವರು ತಿಳಿಸಿದರು.
ಹಿರಿಯ ವಿದ್ಯಾರ್ಥಿಗಳ ನಿರಂತರ ಸಂಪರ್ಕ ಬೇಕು:
ವಿವೇಕಾನಂದ ಕಾಲೇಜಿನಿಂದ ಸುಮಾರು 60ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿದ್ಯಾರ್ಜನೆಗೈದು ಬೇರೆ ಬೇರೆ ಉನ್ನತ ಸ್ಥಾನದಲ್ಲಿದ್ದಾರೆ. ಅವರೆಲ್ಲರ ಸಂಪರ್ಕ ಕಾಲೇಜಿನಲ್ಲಿ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಹಿರಿಯ ವಿದ್ಯಾರ್ಥಿಗಳು ತಮ್ಮ ವಿಳಾಸವನ್ನು ಕಾಲೇಜಿಗೆ ಕಳುಹಿಸಿಕೊಡುವಂತೆ ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ವಾಮನ ಪೈ ವಿನಂತಿಸಿದರು. ಪತ್ರಿಕಾಗೋಷ್ಟಿಯಲ್ಲಿ ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ, ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪತ್ರಿಕೋದ್ಯಮ ವಿಭಾಗದ ಹವ್ಯಶ್ರೀ ಉಪಸ್ಥಿತರಿದ್ದರು.