





ಪುತ್ತೂರು: ನೆಲ್ಯಾಡಿ ಲಹರಿ ಸಂಗೀತ ಕಲಾ ಕೇಂದ್ರ 3ನೇ ವರ್ಷದ ವಾರ್ಷಿಕೋತ್ಸವ “ರಾಗಾಂತರಂಗ” ಕಾರ್ಯಕ್ರಮದಲ್ಲಿ ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ವಿದ್ವಾನ್ ಗಿರೀಶ್ ಕುಮಾರ್ ಅವರಿಗೆ “ಲಹರಿ ಸಾಧಕರತ್ನ” ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಏ.27ರಂದು ನೆಲ್ಯಾಡಿ ದುರ್ಗ ಶ್ರೀ ಟವರ್ಸ್ ಬಳಿಯ ವೇದಿಕೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಣಾಲು ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಧರ್ಮದರ್ಶಿ ಮಾಧವ ಸರಳಾಯ,ದುರ್ಗಾ ಶ್ರೀ ನೆಲ್ಯಾಡಿಯ ಸತೀಶ್ ಕೆ.ಎಸ್, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ, ಪುತ್ತೂರು ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಚಂಪಾಡಿ, ಜೇಸಿಐ ನೆಲ್ಯಾಡಿಯ ಅಧ್ಯಕ್ಷ ಡಾ.ಸುಧಾಕರ್ ಹಾಗೂ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ಲಹರಿ ಕಲಾ ಕೇಂದ್ರದ ಸಂಗೀತ ಗುರು ವಿಶ್ವನಾಥ ಶೆಟ್ಟಿ ಕೆ,ಮಂಗಳೂರು ವಿ.ವಿ. ಘಟಕ ಕಾಲೇಜು, ನೆಲ್ಯಾಡಿಯ ಉಪನ್ಯಾಸಕಿ ಶ್ರುತಿ, ಪ್ರಶಾಂತ್ ಸಿ.ಎಚ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.












