ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ 34ನೆಕ್ಕಿಲಾಡಿ ಸಮೀಪ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ನೆಕ್ಕಿಲಾಡಿಯ ಎಂ.ಆರ್.ಪಿ.ಎಲ್ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.