ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಮೇ.1 ಹಾಗೂ 2ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಜಾತ್ರೋತ್ಸವದಲ್ಲಿ ಮೇ.1ರಂದು ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಶ್ರೀಭೂತ ಬಲಿ ಉತ್ಸವ, ವಸಂತ ಪೂಜೆ, ಪಲ್ಲಕ್ಕಿ ಉತ್ಸವ, ಅಶ್ವತ್ಥ ಕಟ್ಟೆ ಪೂಜೆ, ಕುಂಜೂರು ಬೆಡಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಮೇ.2ರಂದು ಬೆಳಿಗ್ಗೆ ಗಣಪತಿ ಹೋಮ, ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ರಂಗಪೂಜೆ, ದೈವಗಳಗೆ ತಂಬಿಲ, ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆದ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ. ನಂತರ ಶ್ರೀದುರ್ಗಾ ಫ್ರೆಂಡ್ಸ್‌ನ ಪ್ರಾಯೋಜಕತ್ವದಲ್ಲಿ ನಾಲ್ಕನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಂಗಳೂರು ಕಳವಾರು ಬಾಳ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ‘ಕಾರ್ನಿಕದ ಸತ್ಯೊದ ಸ್ವಾಮಿ ಕೊರಗಜ್ಜ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥ ರೈ ತಿಳಿಸಿದ್ದಾರೆ.