





ಪುತ್ತೂರು: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಶಬ್ದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಹಲವರಿಗೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.


ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಡಾ. ಆಶಾ ಪುತ್ತೂರಾಯ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಧರಣಿಯೂ ನಡೆಯಿತು. ಆದರೆ ಕೆಲವರು ಡಾ. ಆಶಾ ಪುತ್ತೂರಾಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಶಬ್ದ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಸಾಮಾಜಿಕ ಜಾಲತಾಣದ ವಾಟ್ಸಪ್ ಗ್ರೂಪ್ ಗಳನ್ನು ಪರಿಶೀಲಿಸಿ ನಿಂದನಾತ್ಮಕ ಶಬ್ದ ಬಳಕೆ ಮಾಡಿ ಸಂದೇಶ ರವಾನೆ ಮಾಡಿದವರಿಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.













