ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಮಂಗಗಳು, ಕಾಡುಹಂದಿ ಹಾಗೂ ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸಿ ಕೊಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಮಹಾಸಭಾದ ನಿಯೋಗ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ನೀಡಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ನಾಯಕ ರಾಮಣ್ಣ ವಿಟ್ಲ, ಅಖಿಲ ಭಾರತ ಕಿಸಾನ್ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮಹಾವೀರ ಜೈನ್, ಅಚ್ಚುತ್ತ ಕಟ್ಟೆ, ಪ್ರೇಮ, ಅಶೋಕ್ ಪೂಜಾರಿ ಎನ್ ಎಸ್ ಡಿ, ಅಬ್ಬು ನವಗ್ರಾಮ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.