ವಿಟ್ಲ : ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಡಿಕ್ಕಿಯಾದ ಘಟನೆ ಆದಾಳ ಎಂಬಲ್ಲಿ ನಡೆದಿದೆ.
ಪೆರುವಾಯಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕುದ್ದುಪದವು ಕಡೆಯಿಂದ ಸಾಗುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ.
ಕಾರಿನ ಚಾಲಕ ಹಾಗೂ ಇತರ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದು,ದ್ವಿಚಕ್ರ ವಾಹನದ ಹಿಂಬದಿ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಏರ್ಬ್ಯಾಗ್ಗಳು ತೆರೆದುಕೊಂಡಿದೆ. ದ್ವಿಚಕ್ರ ವಾಹನ ಮತ್ತು ಕಾರಿಗೂ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ