ಫಾಝಿಲ್ ಹತ್ಯೆ ಕೇಸ್‌ನ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ-ಹತ್ಯೆ

0

ಪುತ್ತೂರು: ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಯುವಕರ ಗುಂಪೊಂದು ತಲವಾರು ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದವನನ್ನು
ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ರಸ್ತೆ ಮಧ್ಯೆ, ಸಾರ್ವಜನಿಕರೆದುರೇ ಈ ಘಟನೆ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿಗೀಡಾಗಿದ್ದಾರೆ. ಸುಹಾಸ್ ಶೆಟ್ಟಿ ಕೊಲೆಗೀಡಾದ ಸುದ್ದಿ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಸೇರಿದಂತೆ ಹಿಂದೂ ಕಾರ್ಯಕರ್ತರು ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರು ಆಗಮಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here