ಕಡಬ: ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು, ಕಡಬದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ.
ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಾಕಿ ಉರಿಸಿದ್ದಾರೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ಘೋಷಣೆ ಕೂಗಲಾಯಿತು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ.