ಸುಹಾಸ್ ಹತ್ಯೆ : ಪುತ್ತೂರಿನಲ್ಲಿ ಅಂಗಡಿ-ಮುಂಗಟ್ಟು ಬಂದ್ ಮಾಡುವಂತೆ ಹಿಂದೂ ಸಂಘಟನೆ ಕಾರ್ಯಕರ್ತರ ಆಗ್ರಹ : ಗೊಂದಲದ ವಾತಾವರಣ

0

ಪುತ್ತೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆಯನ್ನು ಖಂಡಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವಂತೆ ಹಿಂದು ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನಲೆ ಪುತ್ತೂರಿನಲ್ಲಿಯೂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಹಿಂದು ಸಂಘಟನೆ ಪ್ರಮುಖರು ಜಮಾವಣೆಗೊಂಡ ಘಟನೆ ನಡೆದಿದೆ.

ಪುತ್ತೂರು ಬಸ್ ನಿಲ್ದಾಣದ ಬಳಿ ಅಂಗಡಿಗಳನ್ನು ಮುಚ್ಚುವಂತೆ ಹಿಂದು ಸಂಘಟನೆಗಳು ಆಗ್ರಹಿಸುತ್ತಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here