ಕಡಬ: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯನ್ನು ಖಂಡಿಸಿ ಮೇ.2ರಂದು ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನಲೆ ಕಡಬ ಪೇಟೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಆಗಿದೆ.

ವಾಹನ ಸಂಚಾರಗಳು ವಿರಳವಾಗಿತ್ತು. ಬೆಳಗ್ಗಿನ ವೇಳೆ ಸರಕಾರಿ ಬಸ್ಸುಗಳು ಸಂಚಾರ ನಡೆಸಿವೆಯಾದರೂ ಆ ಬಳಿಕ ಸ್ಥಗಿತಗೊಂಡಿದೆ. ಪೊಲೀಸ್ ಅಧಿಕಾರಿಗಳ ತಂಡ ಎಲ್ಲೆಡೆ ಬಿಗು ಬಂದೋಬಸ್ತ್ ಏರ್ಪಡಿಸಿದೆ.