ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಪ್ಪಿನಂಗಡಿ ಅರಫಾ ವಿದ್ಯಾಕೇಂದ್ರಕ್ಕೆ ಶೇ.100 ಫಲಿತಾಂಶ

0

ಉಪ್ಪಿನಂಗಡಿ: ಕಳೆದ ಮಾರ್ಚ್, ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಉಪ್ಪಿನಂಗಡಿ ಅರಫಾ ವಿದ್ಯಾಕೇಂದ್ರಕ್ಕೆ ಶೇ.100 ಫಲಿತಾಂಶ ಲಭಿಸಿದೆ.

ಸಂಸ್ಥೆಯಿಂದ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. 4 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ರಾಬಿಯಾ 603, ಅಮ್ರಾ ಯು.ಕೆ. 583, ಅಮಲ್ 561, ಸಾರಾ ಮೈಮುನ 548 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here