ನೆಲ್ಯಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ನೆಲ್ಯಾಡಿ ಸಂತಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ತೇರ್ಗಡೆ ಫಲಿತಾಂಶ ಲಭಿಸಿದೆ.
ಸಂಸ್ಥೆಯ ಆಂಗ್ಲಮಾಧ್ಯಮ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 35 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 10 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೇಯಾ ಶೆಟ್ಟಿ 602, ಸಿಜಿ ಎಂ.ಎಸ್.595, ಅಮಿನತ್ ರಿಜಾ 589, ಪುನೀತ್‌ರಾಜ್ 565, ಅನ್ವಿತಾ ಕೆ.ಎ. 563, ಮನ್ವಿತ್ 558, ತ್ರಿಶಾ ಪಿ.ಎಂ.556, ಫಾತಿಮಾ ಅಲೀಫಾ 535, ಬಿ.ಶ್ರುತೇಶ್ ಶೆಟ್ಟಿ 534, ಫಾತಿಮ್ ತೊಯಿಬಾ 534 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.