ನೆಲ್ಯಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ 2024-25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ನೆಲ್ಯಾಡಿ ಸಂತಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.96.8 ತೇರ್ಗಡೆ ಫಲಿತಾಂಶ ಲಭಿಸಿದೆ.
ಸಂಸ್ಥೆಯ ಕನ್ನಡ ಮಾಧ್ಯಮ ವಿಭಾಗದಲ್ಲಿ 62 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 60 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 5 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಮಿತ್ 580, ಹೇಮಶ್ರೀ 579, ಸುಪ್ರೀತಾ 550, ಶಿವಾನಿ 548, ಸಾನ್ವಿ ಡಿ.ಸಿ.545 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದ್ದಾರೆ.