ಎಸ್‌ಎಸ್‌ಎಲ್‌ಸಿ: ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ.91.44 ಫಲಿತಾಂಶ

0

ನೆಲ್ಯಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ.91.44 ತೇರ್ಗಡೆ ಫಲಿತಾಂಶ ಬಂದಿದೆ.


ಸಂಸ್ಥೆಯಿಂದ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 32 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಶ್ರದ್ಧಾ 584, ಜೀವಿತಾ ಡಿ.582, ಪ್ರೀತಿಕಾ ಎನ್ 566, ನವ್ಯಶ್ರೀ 562, ನಿಕ್ಷಿತಾ 559, ರೂಪಶ್ರೀ 532 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here