ಆಂಗ್ಲ ಮಾಧ್ಯಮ ವಿಭಾಗ ಶೇ.100, 86 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 126 ವಿದ್ಯಾರ್ಥಿಗಳು ಪ್ರಥಮ
ಪುತ್ತೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಗೆ ಶೇ. 98.70 ಫಲಿತಾಂಶ ಲಭಿಸಿದೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.
ಆಂಗ್ಲ ಮಾಧ್ಯಮ ವಿಭಾಗದಿಂದ 84 ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮ ವಿಭಾಗದಲ್ಲಿ 147 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 231 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಬ್ಬರು ವಿದ್ಯಾರ್ಥಿಗಳು ಗರಿಷ್ಠ 616 ಅಂಕ ಪಡೆದುಕೊಂಡಿದ್ದಾರೆ. ಕನ್ನಡ ಮಾಧ್ಯಮ ವಿಭಾಗದ ಶಮಾ ಫಾತಿಮಾ ಮತ್ತು ಆಂಗ್ಲ ಮಾಧ್ಯಮ ವಿಭಾಗದ ಶ್ರೇಯಾ ಎಂ. ಆರ್.ರವರು 625ರಲ್ಲಿ 616 ಗರಿಷ್ಠ ಅಂಕ ಪಡೆದಿದ್ದಾರೆ. 86 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 126 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗುಣಾತ್ಮಕ ಫಲಿತಾಂಶ “A Grade ” ” ಪಡೆದುಕೊಂಡಿದೆ.