ಕಡಬ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು ಕುಂತೂರುಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.95.74 ತೇರ್ಗಡೆ ಫಲಿತಾಂಶ ಬಂದಿದೆ.
ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳ ಪೈಕಿ 45 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬಿ.ಹರಿಪ್ರಿಯ 594, ಫಾತಿಮತ್ ಅಪ್ರೀದ 582, ಮಿಥುನ್ 576, ರಾಜೀವ 574, ಮಿಥುನ್ ಐ 565, ಮಹಮ್ಮದ್ ಮಿಸ್ಬಾಹ್ 561, ಮಿಥೇಶ್ 559, ಪ್ರೇರಣ 557, ಸಾಹಿನಾ ಬೀಬಿ 550, ಆದಿತ್ಯ 547, ಮಹಮ್ಮದ್ ರಾಶಿದ್ 547, ಜಯಶ್ರೀ 542, ಶ್ವೇತಾ 524, ವಿದ್ಯಾಶ್ರೀ 520, ಸಿಂಚನಾ 517, ಕೆ.ಎನ್.ಬಾಲಸುಬ್ರಹ್ಮಣ್ಯ 505 ಅಂಕ ಪಡೆದುಕೊಂಡಿದ್ದಾರೆ. ಸಂಸ್ಥೆಗೆ ಎ ಗ್ರೇಡ್ ದೊರೆತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ಎಸ್‌ಎಸ್‌ಎಲ್‌ಸಿ: ಕುಂತೂರುಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.95.74 ಫಲಿತಾಂಶ