ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಆಟೋಮೊಬೈಲ್, ಮೆಕ್ಯಾನಿಕಲ್,ಸಿವಿಲ್, ಕಂಪ್ಯೂಟರ್ ಸೈನ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ಲೇಸ್ಮೆಂಟ್ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಾದ TOYOTA United,Bosch limited ,Forvia,Aarbee structure,TPO group,Toyota kirloskar motar ,mandovi motors ಇತ್ಯಾದಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ್ ಎಸ್ ಮಾತನಾಡುತ್ತಾ “ಇದು ನಮ್ಮ ಕಾಲೇಜಿನ ಶ್ರೇಷ್ಠ ಸಾಧನೆ. ವಿದ್ಯಾರ್ಥಿಗಳ ಶ್ರಮ ಹಾಗೂ ಪ್ಲೇಸ್ಮೆಂಟ್ ತಂಡದ ಸಹಕಾರದಿಂದ ಈ ಯಶಸ್ಸು ಸಾಧ್ಯವಾಯಿತು. ಉತ್ತಮ ಕಂಪೆನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.