ವಿಟ್ಲ : ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಶಾಲಾ ವಿದ್ಯಾರ್ಥಿನಿ ಸ್ವಸ್ತಿ ಎಸ್.ಭಟ್ 618 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು, ರಾಜ್ಯಕ್ಕೆ 8ನೇ ಸ್ಥಾನಿಯಾಗಿದ್ದಾರೆ. ಉಳಿದಂತೆ ವಿದ್ಯಾರ್ಥಿಗಳಾದ ವೈಷ್ಣವಿ 615, ನಿವ್ಯಾ ರೈ 608, ಮಹಮ್ಮದ್ ತಝೀಮ್ ಇಕ್ಬಾಲ್ 608, ಲೋಯ್ಲಿನ್ ಪಾಯ್ಸ್ 607, ಸೌರಭ್ ಪ್ರಭು 606 ಹಾಗೂ ಆರೂನ್ ಪಾಯ್ಸ್ 600 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದವರ ಪೈಕಿ 25 ವಿದ್ಯಾರ್ಥಿಗಳು 90ಶೇ.ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ್ದು, 37 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಸಾಧನೆ