ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ಭರದಿಂದ ಸಾಗುತ್ತಿದ್ದು ಮೇ.5 ಬೆಳಿಗ್ಗೆ 11:00 ರಿಂದ ರಾಜಗೋಪುರ ಮತ್ತು ರಥಭೀದಿಯಲ್ಲಿ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ.ಮೂ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ , ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈನ ಅಡಳಿತ ನಿರ್ದೇಶಕರಾದ ಡಾ.ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಶ್ರೀ ರಾಜರಾಜೇಶ್ವರಿ ದೇವಸ್ಥಾನ ಮುಂಡಪಳ್ಳ ಇದರ ಅಡಳಿತ ಮೊಕ್ತೇಸರರಾದ ಕೆ.ಕೆ ಶೆಟ್ಟಿ ಕುತ್ತಿಕಾರು,ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈ .ಲಿ ಬರೋಡಾದ ಅಡಳಿತ ನಿರ್ದೇಶಕರಾದ ಶಶಿಧರ ಶೆಟ್ಟಿ ನವಶಕ್ತಿಯವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ ಸುಬ್ರಹ್ಮಣ್ಯ ರಾವ್ ನಗ್ರಿ ಮತ್ತು ಸದಸ್ಯರು,ಯನ್ ಹರೀಶ ಆಚಾರ್ಯ ನಗ್ರಿಗುತ್ತು ಪವಿತ್ರಪಾಣಿ ಮತ್ತು ಆರ್ಚಕರು ಹಾಗೂ ಸಿಬ್ಬಂದಿ ವರ್ಗದವರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು ಹಾಗೂ,ಅಭಿವೃದ್ಧಿ ಸಮಿತಿಯ ಸದಸ್ಯರು,ವಿವಿಧ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.