ಪುತ್ತೂರು:2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ರಾಷ್ಟ್ರೀಯ ಪ್ರತಿಭಾನ್ವೇಷಣೆ (ಎನ್ಎಂಎಂಎಸ್) ಪರೀಕ್ಷೆಯಲ್ಲಿ ಸ್ಮೃತಿ ಪಲ್ಲತ್ತಾರುರವರು ತೇರ್ಗಡೆ ಹೊಂದಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಇವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಉದ್ಯಮಿ ಪ್ರವೀಣ್ ಪಲ್ಲತ್ತಾರುರವರ ಪುತ್ರಿಯಾಗಿದ್ದಾರೆ.