ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಎಜುಕೇಶನ್ ಸೆಂಟರ್‌ನಲ್ಲಿ 2025-26ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ.
ಇಲ್ಲಿ 5 ರಿಂದ 10ನೇ ತರಗತಿ ವರೆಗೆ ಧಾರ್ಮಿಕ ವಿದ್ಯೆಯೊಂದಿಗೆ ಲೌಕಿಕ ಶಿಕ್ಷಣವನ್ನು ಪಡೆಯುವ ಅವಕಾಶವಿದ್ದು ದೂರದೂರಿನ ವಿದ್ಯಾರ್ಥಿಗಳಿಗೆ ಅಲ್ಲೇ ಉಳಿದುಕೊಂಡು ಶಿಕ್ಷಣ ಪಡೆಯುವ ಹಾಸ್ಟೆಲ್ ವ್ಯವಸ್ಥೆಯೂ ಇದೆ. ಕಲಿಕೆಯಲ್ಲಿ ತೀರಾ ಹಿಂದುಳಿದ ವಿದ್ಯಾರ್ಥಿಗಳನ್ನು ಹೆಚ್ಚಾಗಿ ಇಲ್ಲಿ ಸೇರ್ಪಡೆಗೊಳಿಸುತ್ತಿದ್ದು ಅವರನ್ನು ಮಾದರಿ ವಿದ್ಯಾರ್ಥಿಗಳನ್ನಾಗಿ ಇಲ್ಲಿ ರೂಪಿಸಲಾಗುತ್ತದೆ. ಈಗಾಗಲೇ ಹಲವು ವಿದ್ಯಾರ್ಥಿಗಳು ದಾಖಲಾತಿ ಮಾಡಿಸಿಕೊಂಡಿದ್ದು ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ ಎಂದು ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಎಜುಕೇಶನ್ ಸೆಂಟರ್‌ನ ಅಧ್ಯಕ್ಷ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ತಿಳಿಸಿದ್ದಾರೆ.