ಪುತ್ತೂರು ಟಿಎಪಿಸಿಎಂಎಸ್‌ನ ನೂತನ ವಿಸ್ತರಣಾ ಕಛೇರಿ ಕಟ್ಟಡಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಧನ ಸಹಾಯ ಚೆಕ್ ಹಸ್ತಾಂತರ

0

ಪುತ್ತೂರು: ಟಿಎಪಿಸಿಎಂಎಸ್ ನಿಯಮಿತ ಪುತ್ತೂರು ಇದರ ನೂತನ ವಿಸ್ತರಣಾ ಕಛೇರಿ ಕಟ್ಟಡಕ್ಕೆ ಧನಸಹಾಯ ನೀಡುವಂತೆ ಮನವಿ ಮಾಡಿಕೊಂಡಿದ್ದ ಟಿಎಪಿಸಿಎಂಎಸ್ ಅಧ್ಯಕ್ಷರಾದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಇವರ ಮನವಿ ಪತ್ರಕ್ಕೆ ಸ್ಪಂದಿಸಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ರವರ ನಿರ್ದೇಶನದಂತೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು, ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರ ಮುತುವರ್ಜಿ ಮತ್ತು ಶಿಫಾರಸ್ಸಿನ ಮೇರೆಗೆ ಉಭಯ ಸಂಸ್ಥೆಗಳಿಂದ ತಲಾ ರೂ.5 ಲಕ್ಷ ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತುರವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಸಂಸ್ಥೆಯು ಈಗ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು ಆಡಳಿತ ಮಂಡಳಿಯ ಸತತ ಪ್ರಯತ್ನದಿಂದ ಕಳೆದ ಆರು ವರ್ಷಗಳಿಂದ ಲಾಭ ಗಳಿಸುವ ಮೂಲಕ ದಾಖಲೆಯನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಶುಭ ಹಾರೈಸಿದರು. ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತುರವರು ಮಾತನಾಡಿ, ಧನ ಸಹಾಯ ಬಿಡುಗಡೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here