ಪುತ್ತೂರು; ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ಉಚಿತ ವೈದ್ಯಕೀಯ ಶಿಬಿರದ 38ನೇ ತಿಂಗಳ ಶಿಬಿರವು ಮೇ.4ರಂದು ನಡೆಯಿತು.
ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಸಮಾಜಕ ಬದ್ಧತೆಯೊಂದಿಗೆ ಡಾ.ಸುರೇಶ್ ಪುತ್ತೂರಾಯರವರು ಪ್ರಾರಂಭಿಸಿದ ಉಚಿತ ವೈದ್ಯಕೀಯ ಶಿಬಿರ ಯಶಸ್ವಿಯಾಗಿ ನಡೆಯುತ್ತಿದೆ. 38ಶಿಬಿರಗಳಲ್ಲಿ ಸುಮಾರು 19ಸಾವಿರಕ್ಕಿಂತಲೂ ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಇಂತಹ ಯೋಚನೆಗಳು ಎಲ್ಲರೂ ಮಾಡಿದರೆ ಇಡೀ ಸಮಾಜ ಆರೋಗ್ಯ ವಂತರಾಗಿರಲು ಸಹಕಾರಿಯಾಗಬಹುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರದ ಮೂಲಕ ಪ್ರತಿಯೊಬ್ಬರಿಗೂ ಆರೋಗ್ಯ ದೊರೆಯುವ ಮುಖಾಂತರ ಆರೋಗ್ಯವಂತ ಸಮಾಜವು ನಿರ್ಮಾಣವಾಗಬೇಕು. ಇನ್ನೊಬ್ಬರ ಕಷ್ಟಗಳಿಗೆ ಸ್ಪಂಧನೆ ನೀಡುವ ಕೆಲಸವಾಗಬೇಕು ಎಂದರು.
ನವಚೇತನ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ವಿಜಯ ಬಿ.ಎಸ್., ಮುಕ್ರಂಪಾಡಿ ಸತ್ಯನಾರಾಯಣ ಪೂಜಾ ಸಮಿತಿಯ ಸಂತೋಷ್ ಕುಮಾರ್ ಮುಕ್ರಂಪಾಡಿ, ಮೊಟ್ಟೆತ್ತಡ್ಕ ಐಕ್ಯಕಲಾ ಸೇವಾ ಟ್ರಸ್ಟ್ ನ ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಎಸ್. ಸ್ವಾಗತಿಸಿದರು. ಕಾರ್ಯದರ್ಶಿ ಶಶಿಕಲಾ ನಿರಂಜನ ಶೆಟ್ಟಿ ಪ್ರಾರ್ಥಿಸಿದರು. ಜತೆ ಕಾರ್ಯದರ್ಶಿ ಉಮೇಶ್ ಎಸ್.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಬಾರಿಯ ಶಿಬಿರದಲ್ಲಿ ಲಿವರ್ ಸಮಸ್ಯೆ ಪತ್ತೆ ಹಚ್ಚುವ ಪರೀಕ್ಷೆಯನ್ನು ZYDUS ಸಂಸ್ಥೆಯ ಮೂಲಕ ಉಚಿತವಾಗಿ ನಡೆಸಲಾಯಿತು. ಈ ಪರೀಕ್ಷೆಯು ಮಣಿಪಾಲ ಮತ್ತು ಬೆಂಗಳೂರಿನಲ್ಲಿ ಮಾತ್ರ ಲಭ್ಯವಿರುತ್ತದೆ. ಅಲ್ಲಿ ಪರೀಕ್ಷೆಯ ಶುಲ್ಕ ರೂ. 7000 ವೆಚ್ಚವಾಗಿದ್ದು ಸಂಪ್ಯದ ಶಿಬಿರದಲ್ಲಿ ಉಚಿತವಾಗಿ ನಡೆಸಲಾಯಿತು. 35 ಮಂದಿ ಲಿವರ್ ಪರೀಕ್ಷೆ ಮಾಡಿಸಿಕೊಂಡರು.
ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ನಡೆಸಿ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಕ್ಯ ಕಲಾ ಸೇವಾ ಟ್ರಸ್ಟ್ ಮೊಟ್ಟೆತ್ತಡ್ಕ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ ಹಾಗೂ ಹಲವು ಔಷಧಿ ಕಂಪೆನಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಶಿಬಿರದಲ್ಲಿ ಸಹಕರಿಸಿದ್ದರು.