ಆನ್ಲೈನ್ ಮೂಲಕ ಕ್ರ್ಯಾಶ್ ಕೋರ್ಸ್ ತರಬೇತಿ ಆರಂಭಿಸಲಿರುವ ಅಕಾಡೆಮಿ…
5 ವರ್ಷಗಳಿಂದ ತರಬೇತಿ ನೀಡುತ್ತಿರುವ ವಿದ್ಯಾಮಾತಾದಲ್ಲಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು 190…
ಪುತ್ತೂರು : ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು ಇದೇ ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುತ್ತದೆ.
ಕಳೆದ ಸಾಲಿನಲ್ಲಿ NET/K-SET ಅರ್ಹತಾ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದ ಅಕಾಡೆಮಿ…
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET/ K-SET) ಹಾಗೂ ಸರಕಾರಿ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯು ಕಳೆದ 5 ವರ್ಷಗಳ ಅವಧಿಯಲ್ಲಿ 190ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ರಾಷ್ಟ್ರೀಯ ಅರ್ಹತಾ ಪರೀಕ್ಷೆ ಯ ಕುರಿತ ಮಾಹಿತಿ
ರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸಕರಾಗಲು ನಡೆಯಲಿರುವ ಅರ್ಹತಾ ಪರೀಕ್ಷೆಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಪ್ರಸ್ತುತ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶವಿದೆ.
K-SET/NET ನಿಂದ ಆಗುವ ಪ್ರಯೋಜನ
ಕೆ ಸೆಟ್ ಪಾಸಾದರೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ಪಿ ಎಚ್ ಡಿ ರಿಸರ್ಚ್ ಅಪ್ಲೈ ಮಾಡಿದಾಗ ಲಿಖಿತ ಪರೀಕ್ಷೆ ಇರದೇ ಮೌಖಿಕ ಪರೀಕ್ಷೆ ಮಾತ್ರ ಇರುತ್ತದೆ. ಕೆ ಸೆಟ್ ಉತ್ತೀರ್ಣರಾದವರು NET ಎಕ್ಸಾಮ್ ಉತ್ತೀರ್ಣರಾದರೇ , ಆಲ್ ಓವರ್ ಇಂಡಿಯಾ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸರಕಾರಿ ಸ್ವಾಮ್ಯದಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಡೈಲಿ ವೇಜಸ್ , ಪಾರ್ಟ್ ಟೈಮ್ ಗೆ ಮೊದಲ ಆದ್ಯತೆಯನ್ನು ಕೂಡ ಪಡೆಯಬಹುದು.
ಕೆ ಸೆಟ್ ಪಾಸಾದವರು NET +JRF (ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆ ಕೂಡ ಉತ್ತೀರ್ಣರಾದರೇ , ಪಿ ಎಚ್ ಡಿ ಗೆ ಖಾಲಿ ಇರುವ ಯೂನಿವರ್ಸಿಟಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಪಿ ಎಚ್ ಡಿ ಮಾಡುತ್ತಿರುವಾಗಲೇ ನಾಲ್ಕು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು 45ರಿಂದ 50,000 ರಿಸರ್ಚ್ ಸಬ್ಮಿಟ್ ಆಗುವವರೆಗೆ ಫೇಲೋ ಶಿಪ್ ಬರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9620468869/ 9148935808 ಮೂಲಕ ಸಂಪರ್ಕಿಸುವಂತೆ ಕೋರಲಾಗಿದೆ.