ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ.
ರಾಜಾರಾಮ ಭಟ್ ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ನಿವಾಸಿಯಾಗಿದ್ದು, ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರು.
ದುಬೈ, ಮಸ್ಕತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧಾನರಾದರು ತಿಳಿದುಬಂದಿದೆ.