ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

0

ನೆಲ್ಯಾಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮೇ.4ರಂದು ಸಂಜೆ ಪತ್ನಿಯೊಂದಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕಾಂಗ್ರೆಸ್ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರರು ಉಪಸ್ಥಿತರಿದರು.

LEAVE A REPLY

Please enter your comment!
Please enter your name here