ಕಾಣಿಯೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರು ಉಪಸ್ಥಿತರಿದ್ದರು.