ಪುತ್ತೂರು: ಕುಂಬ್ರ ವರ್ತಕರ ಸಂಘದ ಆಶ್ರಯದಲ್ಲಿ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ಮಂಗಳೂರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ/ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮೇ.11ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮೇ.6ರಂದು ಕುಂಬ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ಪಿ.ಕೆ ಮುಹಮ್ಮದ್ ಕೂಡುರಸ್ತೆ, ಮಾಜಿ ಅಧ್ಯಕ್ಷರುಗಳಾದ ದಿವಾಕರ ಶೆಟ್ಟಿ, ನಾರಾಯಣ ಪೂಜಾರಿ ಕುರಿಕ್ಕಾರ, ಮಾಧವ ರೈ ಕುಂಬ್ರ, ಮೆಲ್ವಿನ್ ಮೊಂತೆರೋ, ಭವ್ಯ ರೈ, ರೇಷ್ಮಾ ಮೆಲ್ವಿನ್, ಸಂಶುದ್ದೀನ್ ಎ.ಆರ್, ರಾಜೇಶ್ ರೈ ಪರ್ಪುಂಜ, ಉದಯ ಆಚಾರ್ಯ ಕೃಷ್ಣನಗರ, ಲಕ್ಷ್ಮಣ ಕೆ, ಪ್ರದೀಪ್ ಶಾಂತಿವನ, ಸಂಪತ್ ಕುಮಾರ್ ಉಪಸ್ಥಿತರಿದ್ದರು.