ಪುತ್ತೂರು: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಮೇ.6ರಂದು ಬೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರೂ ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು.
ಬಳಿಕ ಸುಹಾಸ್ ಶೆಟ್ಟಿ ಅವರ ತಂದೆ ಹಾಗೂ ತಾಯಿಯ ಜೊತೆ ಕೆಲ ಹೊತ್ತು ಮಾತನಾಡಿದರು. ಕುಟುಂಬಕ್ಕೆ ಸಾಂತ್ವನ ನೀಡಿದ ಜೊತೆಗೆ ಕುಟುಂಬದ ಜೊತೆ ಸದಾಕಾಲವೂ ಇರುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸುಳ್ಯ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಾಂಜಿಪಿಳಿ, ಮಾಜಿ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಮಾಜಿ ಕಾರ್ಪೊರೇಟರ್ ವಿಜಯಕುಮಾರ್ ಶೆಟ್ಟಿ, ಪ್ರಮುಖರಾದ ರವೀಶ್ ಶೆಟ್ಟಿ ಕಾರ್ಕಳ, ಸುದರ್ಶನ ಬಜ, ಮಾದವ ಮಾವೆ, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ದಿನೇಶ್ ಶೆಟ್ಟಿ ದಂಬೆದಾರ್, ಅಜಿತ್ ಶೆಟ್ಟಿ ಕಾರಿಂಜ, ಹರೀಶ್ ಕುತ್ತಾರ್,ರವಿರಾಮ ರೈ, ನಾಗೇಶ್ ಶೆಟ್ಟಿ ಕೊಡಂಗಾಯಿ, ಸತೀಶ್ ಶೆಟ್ಟಿ ಮದ್ವ ಅಜಿತ್ ಪುತ್ತೂರು, ರಂಜಿತ್, ಸುಕೇಶ್ ಚೌಟ,ಕಾರ್ತಿಕ್ ಬಲ್ಲಾಳ್, ಶ್ಯಾಮಣ್ಣ ಶೆಟ್ಟಿ, ಹರೀಶ್ ರಾಯಿ ,ಅರುಣ್ ಕುವೆಲ್ಲೋ ಮತ್ತಿತರರು ಉಪಸ್ಥಿತರಿದ್ದರು.