ಹಿರೇಬಂಡಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ2024-25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಗೆ ಶೇ.95.34 ತೇರ್ಗಡೆ ಫಲಿತಾಂಶ ಬಂದಿದೆ.
ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಸಾಜಿದ 606 ಅಂಕ ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎ.ಅದಿಲ್ ಅಹಮದ್ 561, ಚೈತ್ರ 556, ಗುರುಪ್ರಣಯಿ 547, ಶ್ರೀ ರಕ್ಷಾ ಎಸ್.538, ಯಜ್ಞ 526 ಅಂಕ ಪಡೆದುಕೊಂಡಿದ್ದಾರೆ. ಫಲಿತಾಂಶದಲ್ಲಿ ಶಾಲೆಗೆ ಎ ಗ್ರೇಡ್ ಆಗಿರುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.