ನಾಳೆ (ಮೇ.8) : ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ಸೌರ ಶಕ್ತಿ ವಿದ್ಯುತ್ ವ್ಯವಸ್ಥೆಯ ಉದ್ಘಾಟನೆ

0

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿರುವ ಕಸ್ತೂರ್ಬಾ ಉದ್ಯೋಗಸ್ಥ ಮಹಿಳೆಯರ ವಸತಿಗೃಹದಲ್ಲಿ ಸೌರ ಶಕ್ತಿ ವಿದ್ಯುತ್ ವ್ಯವಸ್ಥೆಯ ಉದ್ಘಾಟನಾ ಕಾರ್ಯಕ್ರಮ ಮೇ 8ರಂದು ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ನಡೆಯಲಿದೆ.


ಸೌರಶಕ್ತಿ ವಿದ್ಯುತ್ ವ್ಯವಸ್ಥೆಯ ದಾನಿಯಾಗಿರುವ ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ| ಪಿ ಗೌರಿ ಪೈ ಅವರು ಸೌರಶಕ್ತಿ ವಿದ್ಯುತ್ ಘಟಕವನ್ನು ಉದ್ಘಾಟಿಸಲಿದ್ದಾರೆ. ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಎನ್.ಸುಬ್ರಹ್ಮಣಂ ಕೊಳತ್ತಾಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹರೇಕೃಷ್ಣ ಕಡಂಬಳಿತ್ತಾಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಣಪಾಲ್ ಜೈನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here