ಪುತ್ತೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆ ಶೇ.97.20 ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆ ಬರೆದ 37 ವಿದ್ಯಾರ್ಥಿಗಳ ಪೈಕಿ ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಮಿತಾ(560), ಜಸ್ಮಿತಾ(552), ಎಂ ವರ್ಷಾ(534) ಹಾಗೂ ನಿಖಿಲ್ ಕುಮಾರ್(533) ಉತ್ತಮ ಅಂಕದ ಸಾಧನೆ ಮಾಡಿದ್ದಾರೆ.