ಪುತ್ತೂರು: ಪಹಲ್ಗಾಂನಲ್ಲಿ ಘಟನೆಗೆ ಪ್ರತಿರೋಧವಾಗಿ ಆಪರೇಷನ್ ಸಿಂಧೂರ ಮೂಲಕ ಪಾಕ್ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ನೀಡಲು ಬಿಜೆಪಿ ಮಂಡಲದ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.8 ರಂದು ವಿಶೇಷ ಪ್ರಾರ್ಥನೆ ಮಾಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಕರಾವಳಿ ಅಭಿವೃದ್ಧಿ ಪ್ರಾಧಿಕರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.