





ಪುತ್ತೂರು: ನಗರ ಸಭೆ ಪುತ್ತೂರು ವತಿಯಿಂದ ಗ್ರೀನ್ ಇಂಪಾಕ್ಟ್ ಪುತ್ತೂರು ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜಕತ್ವದಲ್ಲಿ ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಮತ್ತು ಕವಿಗೋಷ್ಠಿ ಕಾರ್ಯಕ್ರಮವು ಮೇ.11ರಂದು ಪೂರ್ವಾಹ್ನ 9.30ಕ್ಕೆ ಮಂಜಲ್ಪಡ್ಪುವಿನಲ್ಲಿರುವ ಸುದಾನ ಶಿಕ್ಷಣ ಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ಜರಗಲಿದೆ.


ಪುತ್ತೂರು ನಗರ ಸಭೆಯ ಅಧ್ಯಕೆ ಲೀಲಾವತಿ ಅಣ್ಣು ನಾಯ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸುದಾನ ವಸತಿಯುತ ಶಾಲೆ ಸಂಚಾಲಕ ರೇ ವಿಜಯ ಹಾರ್ವಿನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರ ಸಭೆಯ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಸದಸ್ಯ ವಸಂತ ಕಾರೆಕ್ಕಾಡು, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಉಮೇಶ್ ನಾಯಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಡಾ| ರಾಜೇಶ್ ಬೆಜ್ಜಂಗಳ ಅವರು ಸ್ವಚ್ಚತೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದ ಸಂಯೋಜನೆಯನ್ನು ಚಿಗುರೆಲೆ ಸಾಹಿತ್ಯ ಬಳಗದ ನಾರಾಯಣ ಕುಂಬ್ರ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.













