VCET ಪುರುಷರ ವಿಭಾಗ- ವಿ.ತಾಂ.ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಶಿಪ್

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದೆ.

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ವಿಜಯದೊಂದಿಗೆ ಕಾಲೇಜಿನ ತಂಡವು ಮೇ.15 ರಿಂದ 17ರ ವರೆಗೆ ಬಳ್ಳಾರಿಯ ಬಿಐಟಿಎಂ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪಧೆಯಲ್ಲಿ ಭಾಗವಹಿಸುವ ಅರ್ಹತೆಯನ್ನು ಗಳಿಸಿಕೊಂಡಿದೆ.

ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿವೇಕ್.ಕೆ.ವಿ, ಅಂತಿಮ ವರ್ಷದ ಎಐಎಂಎಲ್ ವಿಭಾಗದ ಅನ್ವಿತ್.ಬಿ.ಎನ್, ದ್ವಿತೀಯ ಡಾಟಾ ಸೈನ್ಸ್ ವಿಭಾಗದ ಭೀಮಯ್ಯ.ಎಂ.ಆರ್, ತೃತೀಯ ಸಿವಿಲ್ ವಿಭಾಗದ ಮೌನೇಶ್.ಡಿ.ಜೆ, ತೃತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ಕೌಶಲ್ ಗೌಡ.ಆರ್, ವೀಕ್ಷಿತ್ ಗೌಡ, ಧೀಮಂತ್.ಪಿ.ಜೆ, ಶಿವಶಂಕರ್.ಎಂ, ಮನೀಶ್.ಎಚ್.ಎಮ್, ದ್ವಿತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ವೈ.ಪಿ.ದಿಗಂತ್, ಅಂತಿಮ ಎಲೆಕ್ಟ್ರಾನಿಕ್ಸ್ ವಿಭಾಗದ ವಿಜಿತ್.ಬಿ, ತೃತೀಯ ಎಐಎಂಎಲ್ ವಿಭಾಗದ ಧನ್ವಿತ್ ಶೆಟ್ಟಿ, ದ್ವಿತೀಯ ಎಐಎಂಎಲ್ ವಿಭಾಗದ ಭುವನ್.ಕೆ.ಡಿ, ದ್ವಿತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸುಮಂತ್.ಬಿ.ಪಿ ಮತ್ತು ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ವಂಶ್ ಪೊನ್ನಪ್ಪ.ಎ.ಜಿ ಅವರನ್ನೊಳಗೊಂಡ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಪ್ರಥಮ ಬಾರಿಗೆ ಹಾಕಿ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here