ಉಪ್ಪಿನಂಗಡಿ: ಭಾರತೀಯ ಯೋಧರಿಗೆ ಒಳಿತಾಗಲಿ ಹಾಗೂ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂಬ ಸಂಕಲ್ಪದೊಂದಿಗೆ ಭಾರತೀಯ ಸೇನೆಯ ಹೆಸರಿನಲ್ಲಿ ಮೇ.8ರಂದು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಹರೀಶ್ ಉಪಾಧ್ಯಾಯ ಪೂಜೆ ನೆರವೇರಿಸಿ, ಎಲ್ಲರ ಸಮ್ಮುಖದಲ್ಲಿ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ನಾಯ್ಕ್, ಸಿಬ್ಬಂದಿಗಳಾದ ದಿವಾಕರ, ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ಆನಂದ ಮತ್ತಿತರರು ಉಪಸ್ಥಿತರಿದ್ದರು.