ಪುತ್ತೂರು: ಭಾರತೀಯ ಸೈನಿಕರು ನಡೆಸಿದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಮತ್ತು ಸೇನಾ ಕಾರ್ಯಾಚರಣೆಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಮತ್ತು ದೇಶ ಕಾಯುವ ಸೈನಿಕರಿಗೆ ದೀರ್ಘ ಆಯುಷ್ಯ ಮತ್ತು ಆರೋಗ್ಯ ಕೊಟ್ಟು ಕಾಪಾಡಲಿ,ದೇಶಕ್ಕೆ ಒಳಿತಾಗಲಿ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ನಗರ ಮಂಡಲದಿಂದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ ,ನಗರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ,ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ಶಗ್ರಿತ್ತಾಯ , ಆಶಾ ಭಗವಾನ್ ಹಾಗೂ ನಗರಸಭಾ ಸದಸ್ಯರಾದ ಗೌರಿ ಬನ್ನೂರು,ಶಶಿಕಲಾ,ನಗರ ಮಂಡಲ ಉಪಾಧ್ಯಕ್ಷರಾದ ವಸಂತ ಲಕ್ಷ್ಮಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಸರೋಜಿನಿ,ಸುಮತಿ,ನಳಿನಾಕ್ಷಿ ಎಚ್, ವನಿತಾ, ಸುಪ್ರಭ ಉಪಸ್ಥಿತರಿದ್ದರು.