ಪುತ್ತೂರು: ಕಾಸರಗೋಡು ಪೆರ್ಲ ಬಳಿಯ ಕಾಟುಕುಕ್ಕೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ದೇವಸ್ಥಾನದ ಸ್ಕಂದ ಕಲಾ ಮಂಟಪದಲ್ಲಿ ಮಂಗಳವಾರ
ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ) ವತಿಯಿಂದ ‘ನೃತ್ಯೋಹಂ’ ಭರತನಾಟ್ಯ ಪ್ರದರ್ಶನಗೊಂಡಿತು.


ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾ ಕೇಂದ್ರದ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿದರು.