ಭಾರತ-ಪಾಕ್‌ ಸಮರ – IPL ಟೂರ್ನಿ ರದ್ದು

0

ನವದೆಹಲಿ: ಭಾರತ, ಪಾಕ್ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯ ಮುಂದೂಡಿಕೆ ಮಾಡಲಾಗಿದೆ. ಉಳಿದ ಐಪಿಎಲ್ ಪಂದ್ಯಗಳನ್ನ ರದ್ದು ಮಾಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ.

ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್‌ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ.25ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.

ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಅದರಂತೆ ಇಂದಿನಿಂದ ನಡೆಯುವ ಎಲ್ಲಾ ಪಂದ್ಯಗಳನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿದೆ. ಸದ್ಯ ಪ್ಲೇ ಆಫ್ಸ್‌ ಸೇರಿ 16 ಪಂದ್ಯಗಳು ಬಾಕಿ ಉಳಿದಿವೆ.

LEAVE A REPLY

Please enter your comment!
Please enter your name here