ಪುತ್ತೂರು: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಸ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ನಮ್ಮ ದೇಶದ ಸೈನಿಕರಿಗೆ ಶಕ್ತಿ ತುಂಬಲು ಹಾಗೂ ಕೃತಜ್ಞತೆ ಸಲ್ಲಿಸುವ ಸಲುವಾಗಿ ಮಸೀದಿಗಳಲ್ಲಿ ಮೇ.9 ಶುಕ್ರವಾರದ ಜುಮಾ ನಮಾಜಿನ ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕುಂಬ್ರ ಕೆಐಸಿಯಲ್ಲಿ ಅನೀಸ್ ಕೌಸರಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಅಮ್ಚಿನಡ್ಕ ಮಸೀದಿಯಲ್ಲಿ ಸ್ಥಳೀಯ ಖತೀಬ್ ಅಬ್ದುಲ್ ರಹ್ಮಾನ್ ಫೈಝಿ ಪ್ರಾರ್ಥನೆ ನೆರವೇರಿಸಿದರು. ಮಸೀದಿಯ ಅಧ್ಯಕ್ಷ ಇದ್ದಿನ್ ಕುಂಞಿ ಪೆರ್ಲಂಪಾಡಿ, ಪ್ರ.ಕಾರ್ಯದರ್ಶಿ ಮನ್ಸೂರ್ ಅಸ್ಲಮಿ ಅಮ್ಚಿನಡ್ಕ, ಸಾಮಾಜಿಕ ಕಾರ್ಯಕರ್ತ ರಶೀದ್ ಅಮ್ಚಿನಡ್ಕ ಸಹಿತ ಜಮಾಅತರು ಉಪಸ್ಥಿತರಿದ್ದರು.
ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯಲ್ಲಿ ಖತೀಬ್ ನಾಸಿರ್ ಫೈಝಿ ಪ್ರಾರ್ಥನೆ ನೆರವೇರಿಸಿದರು. ಮಸೀದಿಯ ಅಧ್ಯಕ್ಷ ಆರ್.ಎಂ ಅಲಿ ಹಾಜಿ ಮತ್ತು ಜಮಾಅತರು ಉಪಸ್ಥಿತರಿದ್ದರು.
ಕೂಡುರಸ್ತೆ ಮಸೀದಿಯಲ್ಲಿ ಖತೀಬ್ ಬದ್ರುದ್ದೀನ್ ರಹ್ಮಾನಿ ಪ್ರಾರ್ಥನೆ ನೆರವೇರಿಸಿದರು. ಜಮಾಅತರು ಉಪಸ್ಥಿತರಿದ್ದರು.
ಈಶ್ವರಮಂಗಲ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಜಲಾಲುದ್ದೀನ್ ತಂಙಳ್ ಪ್ರಾರ್ಥನೆ ನೆರವೇರಿಸಿದರು.