ನಿಡ್ಪಳ್ಳಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ಯಶಸ್ವಿಯಾಗಿ ಕಾರ್ಯಾಚರಣೆಯನ್ನು ನಡೆಸಿರುವ ಸೇನಾ ಯೋಧರಿಗೆ ಒಳಿತಾಗಲಿ ಮತ್ತು ಸೇನಾ ಯೋಧರಿಗೆ ದೇವರು ಇನ್ನಷ್ಟು ಶಕ್ತಿಯನ್ನು ಅನುಗ್ರಹಿಸಿ ನಮ್ಮ ದೇಶಕ್ಕೆ ಮತ್ತು ಯೋಧರಿಗೆ ಗೆಲುವಾಗಲಿ ಎಂದು ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಿಡ್ಪಳ್ಳಿ ಗ್ರಾಮ ಬಿ.ಜೆ.ಪಿ ಶಕ್ತಿ ಕೇಂದ್ರದ ವತಿಯಿಂದ ಮೆ.8 ರಂದು
ದೇವರಿಗೆ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಪ್ರಾರ್ಥನೆ ಸಲ್ಲಿಸಿದರು.
ಬಿ.ಜೆ.ಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಕುಮಾರ್. ಬಿ, ಪಾಣಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬೂತ್ ಕಾರ್ಯದರ್ಶಿ ಪದ್ಮನಾಭ ಕುಲಾಲ್, ಚಂದ್ರಶೇಖರ ಪ್ರಭು,ಸುಧಾಕರ ಭಟ್, ನಿತ್ಯಾನಂದ ಬೋರ್ಕರ್. ಬಿ, ರಾಜೀವಿ ಡಿ.ರಾವ್ ಮತ್ತು ಪಕ್ಷದ ಕಾರ್ಯಕರ್ತರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.