ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಈಶ್ವರಮಂಗಲ ಶಾಖೆಯಲ್ಲಿ ಸಂಘದ ಸದಸ್ಯರ ಮತ್ತು ಗ್ರಾಹಕರ ಸಮಾವೇಶ ಹಾಗೂ ಕೃಷಿ ಮಾಹಿತಿ ಕಾರ್ಯಾಗಾರವು ಮೇ.13ರಂದು ಬೆಳಿಗ್ಗೆ ಗಂಟೆ 10ಕ್ಕೆ ಈಶ್ವರಮಂಗಲ ಶಾಖೆಯ ಸಹಕಾರಿ ಸದನದಲ್ಲಿ ನಡೆಯಲಿದೆ.
ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ, ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ದ.ಕ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ಶಾಸ್ತ್ರ ವಿಜ್ಞಾನಿ ಡಾ. ಕೇದಾರನಾಥ್‌ರವರು ಎಲೆಚುಕ್ಕಿ ರೋಗದ ನಿರ್ವಹಣೆ ಹಾಗೂ ರಸಗೊಬ್ಬರ ಸಮರ್ಪಕ ಬಳಕೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸಂಘದ ಸದಸ್ಯರುಗಳು ಮತ್ತು ಗ್ರಾಹಕರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.