ಆಲಂಕಾರು: ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ 7 ದಿನಗಳ ವಿಶೇಷ ಬೇಸಿಗೆ ಕ್ರೀಡಾ ಶಿಬಿರ ನಡೆಯಲಿದೆ. ಇದರ ಉದ್ಘಾಟನೆಯನ್ನು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ದುರ್ಗಾಂಬಾ ವಿದ್ಯಾವರ್ಧಕ ಸಂಘ ರಿ. ಆಲಂಕಾರು ಇದರ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಇಂತಹ ಶಿಬಿರಗಳು ಅತ್ಯವಶ್ಯಕ ಆದ್ದರಿಂದ ಎಲ್ಲಾ ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಹಿಂದಿ ಶಿಕ್ಷಕರಾದ ಮಹೇಶ್ ಲಮಾಣಿ ಉಪಸ್ಥಿತರಿದ್ದರು. ಬೇರೆ ಬೇರೆ ವಿದ್ಯಾ ಸಂಸ್ಥೆಗಳ 50 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದರು. ಆಂಗ್ಲಭಾಷಾ ಶಿಕ್ಷಕರಾದ ಜನಾರ್ದನ ರವರು ಕಾರ್ಯಕ್ರಮ ನಿರೂಪಿಸಿ. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಗುರು ನವೀನ್ ರೈ ವಂದಿಸಿದರು. ಕ್ರೀಡಾಭಿಮಾನಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.