ಪುತ್ತೂರು: ಜಿಲ್ಲೆಯಲ್ಲಿ ಕೆಲವು ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಪೇಟೆಯಲ್ಲಿ ಸಂಜೆ ಪೊಲೀಸ್ ಪಥ ಸಂಚಲನ ನಡೆಯಿತು.

ಪುತ್ತೂರು ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್, ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸಂಚಾರ ಪೊಲೀಸ್ ಠಾಣೆ ಎಸ್ ಐ, ಮತ್ತು ವಿವಿಧ ಠಾಣೆಯ ಪೊಲೀಸರು ಪಥ ಸಂಚಲನದ ಮೂಲಕ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಂದೇಶ ನೀಡಿದರು.

